ಎಲ್ಲರ ಸಹಕಾರದಿಂದ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಯಿತು: ಬಿ. ಸದಾಶಿವ ಪ್ರಭು
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ 2.5 ವರ್ಷಗಳ ಅವಧಿಯಲ್ಲಿ ಕಂದಾಯ, ಜಿಲ್ಲಾ ಪಂಚಾಯತ್, ಪೌರಾಡಳಿತ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉತ್ತಮವಾದ ಸಹಕಾರವನ್ನು ನೀಡಿದ್ದು, ಇದರಿಂದಾಗಿಯೇ ಜಿಲ್ಲೆಯಲ್ಲಿ ಹಲವು ಉತ್ತಮ ಕಾರ್ಯಗಳನ್ನು ಮಾಡಲು ಸಾಧ್ಯವಾಯಿತು ಎಂದು ಉಡುಪಿಯಿಂದ ವರ್ಗಾವಣೆಗೊಂಡಿರುವ ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು ಹೇಳಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಕೋವಿಡ್-19 ಅವಧಿಯಲ್ಲಿ, ಕ್ವಾರಂಟೈನ್ ಕೇಂದ್ರಗಳು ಮತ್ತು ಕೋವಿಡ್ ಕೇರ್‌ಸೆಂಟರ್‌ಗಳ ನಿರ್ವಹಣೆಯು ಸವಾಲಿನ […]