ಮಾರಣಾಂತಿಕ ಕೊರೊನಾ: ಮಂಗಳೂರು ವಿಮಾನ‌ ನಿಲ್ದಾನದಲ್ಲಿ ಕಟ್ಟೆಚ್ಚರ

ಮಂಗಳೂರು: ಮಾರಣಾಂತಿಕ ಕೊರೊನಾ ವೈರಸ್ ಭೀತಿ ಇದೀಗ ಕರ್ನಾಟಕವನ್ನೂ ಆವರಿಸಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ. ಮಂಗಳೂರಿನ ಏರ್​ಪೋರ್ಟ್​ ಹಾಗೂ ಹಡಗಿನ ಮೂಲಕ ಬರುವವರನ್ನೂ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಬೇರೆ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ದುಬೈ ಸೇರಿದಂತೆ ಎಲ್ಲಾ ದೇಶಗಳಿಂದ ಬರುವ ಫ್ಲೈಟ್ ನಲ್ಲಿ ಹೆಚ್ಚುವರಿ ತಪಾಸಣೆ ಮಾಡಲಾಗ್ತಿದೆ. ಅತ್ತ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸೋಲೇಟರ್ ವಾರ್ಡ್ ನಿರ್ಮಾಣ ಕೂಡಾ ಮಾಡಲಾಗಿದೆ.