ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಕೊರೊನಾ ಪಾಸಿಟಿವ್
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಅಮಿತ್ ಷಾ ಅವರು ಟ್ವೀಟ್ ಮಾಡಿದ್ದು, ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಈಗಾಗಲೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆರೋಗ್ಯವಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜತೆ ಸಂಪರ್ಕದಲ್ಲಿ ಇದ್ದವರು ಕೊರೊನಾ ಟೆಸ್ಟ್ ಮಾಡಿಸಿ ಜತೆಗೆ ಐಸೋಲೇಶನ್ ನಲ್ಲಿ ಇರುವಂತೆ ತಮ್ಮ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.