ರಾಜ್ಯದಲ್ಲಿ ಮತ್ತೊಂದು ಕೊರೊನಾ ಸೋಂಕು ಪ್ರಕರಣ ಪತ್ತೆ: ಮೆಕ್ಕಾದಿಂದ ಮರಳಿದ್ದ ಗೌರಿಬಿದನೂರಿನ ವ್ಯಕ್ತಿಗೆ ಕೊರೊನಾ
ಉಡುಪಿ: ರಾಜ್ಯದಲ್ಲಿ ಮೊತ್ತೊಂದು ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಈಚೆಗೆ ಮೆಕ್ಕಾ ಯಾತ್ರೆ ಮುಗಿಸಿ ಮರಳಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ 32 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿಗೆ ಗೌರಿಬಿದನೂರಿನ ರಾಜೀವ ಗಾಂಧಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಈ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ.