ವಿದೇಶದಲ್ಲಿ ಸಿಲುಕಿಕೊಂಡ 177 ಕರಾವಳಿಗರು ಇಂದು ಮಂಗಳೂರಿಗೆ
ಮಂಗಳೂರು: ಕೊರೊನಾದಿಂದ ವಿದೇಶದಲ್ಲಿ ಸಿಲುಕಿಕೊಂಡಿದ್ದ 177 ಕರಾವಳಿಗರು ಇಂದು ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಏರ್ ಇಂಡಿಯಾ IX 0384 ವಿಮಾನದ ಮೂಲಕ ದುಬೈನಿಂದ ಭಾರತೀಯ ಕಾಲಮಾನ ಸಂಜೆ 4.10ಕ್ಕೆ ವಿಮಾನ ಹೊರಡಲಿದ್ದು, ರಾತ್ರಿ ಸುಮಾರು 9.10ರ ವೇಳೆಗೆ ಮಂಗಳೂರು ವಿಮಾನ ನಿಲ್ದಾಣ ತಲುಪುವ ಸಾಧ್ಯತೆ ಇದೆ. ದುಬೈಯಿಂದ ಬರುವ 177 ಪ್ರಯಾಣಿಕರಲ್ಲಿ ಎಷ್ಟು ಮಹಿಳೆಯರು, ಪುರುಷರು ಹಾಗೂ ಗರ್ಭಿಣಿಯರು, ಆರೋಗ್ಯ ಸಮಸ್ಯೆ ಎಂಬುವುದು ದುಬೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಬೋರ್ಡಿಂಗ್ ಆದ ಬಳಿಕವಷ್ಟೇ […]