ಉಡುಪಿ: ಕೊರೊನಾಗೆ 82 ವರ್ಷದ ವೃದ್ಧ ಬಲಿ, ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿಕೆ
ಉಡುಪಿ: ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಕಾಪು ತಾಲ್ಲೂಕಿನ ಪಡುಬಿದ್ರಿ ನಿವಾಸಿ 82 ವರ್ಷದ ವೃದ್ಧರೊಬ್ಬರು ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಶಾಸ್ವಕೋಶ ಹಾಗೂ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಉಸಿರಾಟದ ಸಮಸ್ಯೆ ಉಲ್ಬಣಗೊಂಡಾಗ ಅವರ ಗಂಟಲಿನ ದ್ರವದ ಮಾದರಿಯನ್ನು ಕೊರೊನಾ ಪರೀಕ್ಷೆಗೆ ಕಳುಹಿಸಲಾಗಿತ್ತು. ಆದರೆ ವ್ಯಕ್ತಿಯೂ ಚಿಕಿತ್ಸೆ ಫಲಿಸದೆ ನಿನ್ನೆ ಸಂಜೆ ಮೃತಪಟ್ಟಿದ್ದು, ಅವರ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ […]