ಮಣಿಪಾಲ: ಕೊರೊನಾ ಸೋಂಕಿಗೆ ಶಿವಮೊಗ್ಗದ 75 ವರ್ಷದ ವೃದ್ಧ ಬಲಿ

ಮಣಿಪಾಲ: ಇಲ್ಲಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆಯ 75 ವರ್ಷದ ಕೊರೊನಾ ಸೋಂಕಿತ ವೃದ್ಧರೊಬ್ಬರು ಜು.24ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಗೆ ಕೆಎಂಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈ ವ್ಯಕ್ತಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆಗ ಇವರಿಗೆ ಕೊರೊನಾ ಇರುವುದು ದೃಢಪಟ್ಟಿದ್ದು, ತೀವ್ರ ನಿಗಾ ಘಟಕದಲ್ಲಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಾಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.