ಉಡುಪಿಯಲ್ಲಿ ಇಂದು ಕೊರೊನಾಗೆ ನಾಲ್ಕು ಮಂದಿ ಬಲಿ: ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿದ್ದು, ಇದರ ಜತೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಕೂಡ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ನಾಲ್ಕು ಮಂದಿ ಕೊರೊನಾದಿಂದ ಅಸುನೀಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಜಿಲ್ಲೆಯಲ್ಲಿ ಇಂದು 61 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 2372 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. […]