ಉಡುಪಿಯ ಮೊದಲ ಕೊರೊನಾ ಸೋಂಕಿತ ಆಸ್ಪತ್ರೆಯಿಂದ ಡಿಸ್ಚಾರ್ಜ್: 14 ದಿನ ಹೋಮ್ ಕ್ವಾರಂಟೈನ್ ನಲ್ಲಿ ಇರುವಂತೆ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಪ್ರಥಮವಾಗಿ ಕೊರೊನಾ ವೈರಸ್ (ಕೋವಿಡ್-19) ತುತ್ತಾದ ಮಣಿಪಾಲದ 34ರ ಹರೆಯದ ಯುವಕ ಸಂಪೂರ್ಣ ಗುಣಮುಖನಾಗಿದ್ದು, ಆತನನ್ನು ಇಂದು ರಾತ್ರಿ 9.10 ಸುಮಾರಿಗೆ ಉಡುಪಿಯ ಡಾ. ಟಿಎಂಎ ಪೈ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ಹೇಳಿದ್ದಾರೆ. ಸೋಮವಾರ ಮತ್ತು ಬುಧವಾರ ಎರಡು ಬಾರಿ ಈತನ ಗಂಟಲಿನ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆ ಎರಡು ಮಾದರಿಗಳಲ್ಲಿ ನೆಗೆಟಿವ್ ಬಂದಿದ್ದು,  ಇದೀಗ ಆತ ಸೋಂಕಿನಿಂದ […]