ಕೊರೋನಾ ಎಫೆಕ್ಟ್: 1.70 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ನವದೆಹಲಿ: ಕರೋನಾ ವಿರುದ್ಧದ ಸಮರದಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡುತ್ತಿರುವ ಡಾಕ್ಟರ್ಸ್, ಆಶಾ ಕಾರ್ಯಕರ್ತೆಯರು, ನರ್ಸ್ಗಳು ಎಲ್ಲರಿಗೂ ಪ್ರತಿಯೊಬ್ಬರಿಗೂ ತಲಾ 50 ಲಕ್ಷರೂಪಾಯಿ ಮೌಲ್ಯದ ಮೆಡಿಕಲ್ ಇನ್ಶೂರೆನ್ಸ್ ಒದಗಿಸುತ್ತಿದ್ದೇವೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. ಕೊರೋನಾ ಭೀತಿಯಿಂದ ದೇಶ ತತ್ತರಿಸಿ ಹೋಗಿದೆ.ಬಡವರು, ವಲಸಿಗರು, ಮಹಿಳೆಯರು ಮತ್ತು ಇತರೆ ಶ್ರಮಿಕ ವರ್ಗದವರನ್ನು, ಸೋಂಕು ನಿವಾರಣೆಗಾಗಿ ಹೋರಾಡುತ್ತಿರುವ ಕರೊನಾ ವಾರಿಯರ್ಸ್ ಅವರನ್ನೂ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ 1.70 ಲಕ್ಷ ಕೋಟಿ ರೂಪಾಯಿಗಳ ಪ್ಯಾಕೇಜನ್ನು ಘೋಷಿಸಿದೆ. ವಿಶೇಷ ಪ್ಯಾಕೇಜ್ ಬಿಡುಗಡೆ: ಬಡವರಿಗೆ […]