ಲಾಕ್ ಡೌನ್ ಮಾತ್ರ ತೆರವುಗೊಂಡಿದೆ, ಕೊರೊನಾ ಇನ್ನೂ ಹೋಗಿಲ್ಲ: ಜನತೆಗೆ ಜಾಗೃತೆಯ ಪಾಠ ಹೇಳಿದ ಪ್ರಧಾನಿ ಮೋದಿ

ಬೆಂಗಳೂರು: ದೇಶದಲ್ಲಿ ಲಾಕ್‌ಡೌನ್‌ ಅನ್ನು ತೆರವುಗೊಳಿಸಲಾಗಿದೆ. ಆದರೆ, ಕೊರೊನಾ ಇಲ್ಲಿಂದ ಹೊರಗೆ ಹೋಗಿಲ್ಲ. ಹಾಗಾಗಿ ಸಾಲು ಸಾಲು ಹಬ್ಬಗಳು ಬರುತ್ತಿರುವ ಈ ಸಮಯದಲ್ಲಿ ದೇಶದ ಜನರು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಜನತೆಗೆ ಕರೆ ನೀಡಿದರು. ಅವರು ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದರು. ಕೊರೊನಾ ವೈರಸ್‌ ಸೋಂಕಿನ ವಿರುದ್ಧ ಹೋರಾಟ ನಡೆಯುತ್ತಿದ್ದು, ನಮ್ಮ ಜವಾಬ್ದಾರಿ ನಿರ್ವಹಿಸಲು ಮತ್ತು ಜೀವನಕ್ಕೆ ಹೊಸ ಗತಿ ಕೊಡಲು ಪ್ರತಿದಿನ ಮನೆಯಿಂದ ಹೊರಗೆ ಬರಬೇಕಿದೆ. ನಾವು ಮನೆಯಿಂದ ಹೊರಗೆ […]