ಕೊರೊನಾಗೆ ದೇಶದಲ್ಲಿ ಒಂದೇ ದಿನ 24,850 ಪ್ರಕರಣ ದಾಖಲು

ಬೆಂಗಳೂರು: ದೇಶಾದ್ಯಂತ ಕೊರೊನಾ ಆರ್ಭಟ ಹೆಚ್ಚುತ್ತಿದ್ದು, ಕಳೆದ 24 ಗಂಟೆಗಳಲ್ಲಿ  24,850 ಸೋಂಕು ಪ್ರಕರಣಗಳು ದಾಖಲಾಗಿದೆ. ಕೊರೊನಾ ಸೋಂಕಿನಿಂದ 613 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಒಂದೇ ದಿನ ಅತಿ ಹೆಚ್ಚು ಪ್ರಕರಣಗಳು ವರದಿಯಾಗುವ ಮೂಲಕ ದೇಶದಲ್ಲಿ ಒಟ್ಟುಸೋಂಕಿತರ ಸಂಖ್ಯೆ 6,73,165ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 4,09,083 ಮಂದಿ ಗುಣಮುಖರಾಗಿದ್ದು, 2,44,814 ಮಂದಿ ಜನರು ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 19,268 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ.