23 ಸಾವಿರ ಮೀನುಗಾರರ 60 ಕೋಟಿ ರೂ. ಸಾಲಮನ್ನಾ: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ರಾಜ್ಯ ಸರ್ಕಾರ ಘೋಷಣೆ ಮಾಡಿದ ಮೀನುಗಾರರ ಸಾಲಮನ್ನಾ ಯೋಜನೆಯಡಿ 23 ಸಾವಿರ ಜನ ಫಲಾನುಭವಿಗಳಿಗೆ 60 ಕೋಟಿ ರೂಪಾಯಿಯನ್ನು ರಾಜ್ಯ ಹಣಕಾಸು ಇಲಾಖೆ ಅಧಿಕೃತವಾಗಿ ಇಂದು ಬಿಡುಗಡೆ ಮಾಡಿದೆ ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಈ ಸಾಲಮನ್ನಾದ ಹಣ ಭೂಮಿ ಕೋಶದ ಮೂಲಕ ಸಾಲಗಾರರ ಖಾತೆಗೆ ಜಮಾ ಮಾಡಲು ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ. ಈ ಕರೋನದ ಸಂಕಷ್ಟದ ದಿನಗಳಲ್ಲೂ ಕೂಡ ಮೀನುಗಾರರ ಹಿತರಕ್ಷಣೆಗಾಗಿ 60 ಕೋಟಿ ರೂಪಾಯಿ […]
ಕೊರೊನ ವಾರಿಯರ್ಸ್ ಹಲ್ಲೆ ಪ್ರಕರಣ ಗಂಭೀರವಾಗಿ ಪರಿಗಣಿಸಲಾಗಿವುದು: ಸಚಿವ ಕೋಟ
ಮಂಗಳೂರು: ಕೊರೋನಾ ವಾರಿಯರ್ಸ್ ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ಪೊಲೀಸರು, ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಗಳು ನಡೆದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಹಲ್ಲೆ ಮಾಡಿದವರನ್ನು ಗೂಂಡಾ ಕೇಸ್ ಹಾಕುವ ಮೂಲಕ ಜೈಲಿಗಟ್ಟಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಸಿದ್ದಾರೆ. ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಎಸ್ ಸಿಡಿಸಿಸಿ ಬ್ಯಾಂಕ್ ವತಿಯಿಂದ ನೀಡಿರುವ ದಿನಸಿ ಸಾಮಾಗ್ರಿಗಳನ್ನು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಹಸ್ತಾಂತರ ಮಾಡಿ ಮಾತನಾಡಿದರು. ಕೊರೋನಾ […]
ಜನೌಷಧಿ ಕೇಂದ್ರಗಳನ್ನು ಬೆಳಿಗ್ಗೆ 7ಗಂಟೆಗೆ ತೆರೆಯಿರಿ: ಸಚಿವ ಕೋಟ ಸೂಚನೆ
ಉಡುಪಿ: ಕೇಂದ್ರ ಸರ್ಕಾರದ ಜನೋಪಯೋಗಿ ಯೋಜನೆಯಾದ ಜನೌಷಧಿ ಕೇಂದ್ರವನ್ನು ಬೆಳಿಗ್ಗೆ 9 ಗಂಟೆಯ ಬದಲು ಬೆಳಿಗ್ಗೆ 7 ಗಂಟೆಗೆ ತೆರೆಯುವಂತೆ ಮುಜರಾಯಿ ಹಾಗೂ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನೌಷಧಿ ಕೇಂದ್ರಗಳ ಮೇಲ್ವಿಚಾರಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜನೌಷಧ ಕೇಂದ್ರಗಳನ್ನು ಬೆಳಿಗ್ಗೆ 9 ಗಂಟೆಯ ಬಳಿಕ ತೆರೆಯುವುದರಿಂದ ಅನೇಕರಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳು ಬಂದಿವೆ. ಆದ್ದರಿಂದ ಏಪ್ರಿಲ್ 14ರಿಂದ ಬೆಳಿಗ್ಗೆ 7 ಗಂಟೆಗೆ ತೆರೆಯುವಂತೆ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ […]
ಕೊರೊನಾ ಭೀತಿ: ಹೋಂ ಕ್ವಾರಂಟೈನ್ ಸೀಲ್ ಹಾಕಿಸಿಕೊಂಡವರು ಸುತ್ತಾಡಿದರೆ ಪೊಲೀಸ್ ವಶಕ್ಕೆ: ಕೋಟ
ಮಂಗಳೂರು: ಕೊರೊನಾ ತಡೆಗಟ್ಟಲು ಹೋಂ ಕ್ವಾರಂಟೈನ್ ಸೀಲ್ ಹಾಕಿಸಿಕೊಂಡವರು ಮನೆಯಲ್ಲಿ ಇರಬೇಕು. ಒಂದು ವೇಳೆ ಸುತ್ತಾಡುವುದು ಕಂಡುಬಂದರೆ ಪೊಲೀಸ್ ವಶಕ್ಕೆ ನೀಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೋಂ ಕ್ವಾರಂಟೈನ್ ಸೀಲ್ ಹಾಕಿಸಿಕೊಂಡವರು ಗೃಹಬಂಧನದಲ್ಲಿದ್ದಂತೆ ಮನೆಯಲ್ಲಿ ಇರಬೇಕು. ಹೊರಗೆ ತಿರುಗಾಡಬಾರದು ಎಂದು ಸೂಚಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಿಂದ ಕೇರಳ ಸಂಪರ್ಕಿಸುವ 17 ರಸ್ತೆಗಳನ್ನು ಮುಚ್ಚಲಾಗಿದ್ದು, ತುರ್ತು ಅಗತ್ಯವಿದ್ದರೆ ಮಾತ್ರ ತಲಪಾಡಿ ರಸ್ತೆಯಲ್ಲಿ ಬಿಡಲಾಗುವುದು ಎಂದರು. ದಕ್ಷಿಣ […]