ದೇಶದಲ್ಲಿ 50 ಕ್ಕೇರಿದ ಮೃತರ ಸಂಖ್ಯೆ: ಮಹಾರಾಷ್ಟ್ರದಲ್ಲಿ ಇನ್ನೊಂದು ಸಾವು
ದೇಶ: ಬುಧವಾರ ಮಹಾರಾಷ್ಟ್ರದಲ್ಲಿ ಸೋಂಕಿತರೊಬ್ಬರು ಸಾವಿಗೀಡಾಗಿದ್ದು, ಇದೀಗ ದೇಶದಲ್ಲಿ ಕೋವಿಡ್–19ನಿಂದಾಗಿ ಮೃತಪಟ್ಟವರ ಸಂಖ್ಯೆ 50ಕ್ಕೇರಿದೆ. ಇದರಿಂದ ಮಹಾರಾಷ್ಟ್ರದಲ್ಲಿ ಸಾವಿಗೀಡಾದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ ಹಾಗೂ 18 ಸೋಂಕು ಪ್ರಕರಣಗಳು ವರದಿಯಾಗಿದೆ.ಒಟ್ಟು ಸೋಂಕು ಪ್ರಕರಣಗಳು 320 ತಲುಪಿದೆ. ಈ ಮೂಲಕ ದೇಶದಾದ್ಯಂತ ಒಟ್ಟು ಸೋಂಕು ಪ್ರಕರಣಗಳು 1,500 ದಾಟಿದೆ. ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 102 ಕ್ಕೇರಿದೆ.