ಕೊರೋನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಹಾಗೂ ನೈರ್ಮಲ್ಯ ಕಾಪಾಡಿಕೊಳ್ಳಿ: ಡಿಹೆಚ್‍ಓ
ಉಡುಪಿ ಏ.8: ಕೊರೋನಾ ನಿಯಂತ್ರ್ರಿಸಲು ಅತ್ಯಗತ್ಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಮತ್ತು ನೈರ್ಮಲ್ಯ ಹಾಗೂ ಶುಚಿತ್ವ ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಅವರು ಬುಧವಾರ, ಉಡುಪಿ ರೆಡ್ ಕ್ರಾಸ್ ಭವನದ ಮುಂಬಾಗದಲ್ಲಿ, ಕಾರ್ಮಿಕ ಇಲಾಖೆ, ಉಡುಪಿ ಹಾಗೂ ಭಾರತೀಯ ರೆಡ್ ಕ್ರಾಸ್ ಘಟಕ ಉಡುಪಿ ರವರ ವತಿಯಿಂದ ಕೊರೋನಾ ಕುರಿತು ಜಾಗೃತಿ ಮೂಡಿಸುವ ಸಂಚಾರಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಕೊರೋನಾ ಹರಡುವಿಕೆಯನ್ನು ನಿಯಂತ್ರಿಸುವಲ್ಲಿ […]