ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೊನಾ ಪಾಸಿಟಿವ್
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಕೋವಿಡ್ ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲ ಎಂದು ತಿಳಿಸಿದ್ದಾರೆ. ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡಿದ್ದಾರೆ.