ಸಿಎಂ ಗೃಹ ಕಚೇರಿ ಕೃಷ್ಣಾದ 6 ಕ್ಕಿಂತಲೂ ಹೆಚ್ಚು ಸಿಬ್ಬಂದಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದ 6ಕ್ಕಿಂತಲೂ ಹೆಚ್ಚಿನ ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನಿನ್ನೆ ಸಿಎಂ ಹಾಗೂ ಅವರ ಮಗಳು ಪದ್ಮಾವತಿಯವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಅವರ ಗೃಹ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು 6ಕ್ಕಿಂತಲೂ ಹೆಚ್ಚಿನ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಹೇಳಲಾಗುತ್ತಿದೆ. ಎರಡು ಆ್ಯಂಬುಲೆನ್ಸ್ ಗಳಲ್ಲಿ ಸಿಬ್ಬಂದಿಯನ್ನು ಕರೆದೊಯ್ಯದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. […]