ಉಡುಪಿ: ನಾಲ್ಕು ಮಕ್ಕಳು ಸಹಿತ 11 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ನಾಲ್ಕು ಮಕ್ಕಳು ಸಹಿತ ಇಂದು ಜಿಲ್ಲೆಯಲ್ಲಿ 11 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1088 ಕ್ಕೆ ಏರಿಕೆ ಆಗಿದೆ. ಈವರೆಗೆ 969 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನು 117 ಮಂದಿ ಸಕ್ರಿಯ ಸೋಂಕಿತ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ‌ ನೀಡಿದೆ.

ಉಡುಪಿ: ಇಂದು ಮತ್ತೆ 20 ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮತ್ತಷ್ಟು ವೇಗ ಪಡೆದುಕೊಂಡಿದ್ದು, ಇಂದು ಮತ್ತೆ 20 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1026ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯ ಮಾಹಿತಿ ನೀಡಿದೆ.

ಉಡುಪಿ: 62 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 471ಕ್ಕೆ ಏರಿಕೆ

ಉಡುಪಿ: ಜಿಲ್ಲೆಯಲ್ಲಿ ಇಂದು ಹೊಸದಾಗಿ 62 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 62 ಸೋಂಕಿತರ ಪೈಕಿ 43 ಪುರುಷರು, 15 ಮಹಿಳೆಯರು ಹಾಗೂ ನಾಲ್ಕು ಮಕ್ಕಳು ಇದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಇದರಲ್ಲಿ ಬಹುತೇಕ ಸೋಂಕಿತರು ಮುಂಬೈಯಿಂದ ಬಂದವರಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 471 ಕ್ಕೆ ಏರಿಕೆಯಾಗಿದೆ.

ಉಡುಪಿಗೆ ‘ಮಹಾ’ ಉರುಳು: ಇಂದು ಒಂದೇ ದಿನ 73 ಕೊರೊನಾ ಪಾಸಿಟಿವ್

ಉಡುಪಿ: ಮುಂಬೈನಿಂದ ಬಂದವರು ಉಡುಪಿ ಜಿಲ್ಲೆಗೆ ಮತ್ತೆ ಕಂಟಕವಾಗಿದ್ದು, ಇಂದು ಒಂದೇ ದಿನ ಜಿಲ್ಲೆಯಲ್ಲಿ 73 ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಇದು ಜಿಲ್ಲೆಯ ಜನರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಜಿಲ್ಲೆಯ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 260ಕ್ಕೆ ಏರಿಕೆಯಾಗಿದೆ.