ವಿದೇಶ, ಹೊರ ರಾಜ್ಯದಿಂದ ಬರುವವರಿಗೆ ಸುವ್ಯವಸ್ಥಿತವಾದ ರೀತಿಯಲ್ಲಿ ಕ್ವಾರಂಟೈನ್ ಮಾಡುತ್ತೇವೆ:ಹಾಲಾಡಿ ಶ್ರೀನಿವಾಸ ಶೆಟ್ಟಿ

ಕುಂದಾಪುರ: ವಿದೇಶ, ರಾಜ್ಯ, ಜಿಲ್ಲೆಗಳಲ್ಲಿರುವ ನಮ್ಮವರು ಇಲ್ಲಿಗೆ ಬಂದಾಗ ಯೋಗ್ಯ ರೀತಿಯಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡುವುದು ನಮ್ಮ ಆದ್ಯ ಕರ್ತವ್ಯ. ನಮ್ಮನ್ನೇ ನಂಬಿಕೊಂಡು ಅವರೆಲ್ಲಾ ಬರುತ್ತಿದ್ದಾರೆ. ಆ ನಿಟ್ಟಿನಲ್ಲಿ ಸುವ್ಯವಸ್ಥಿತವಾದ ರೀತಿಯಲ್ಲಿ ಕ್ವಾರಂಟೈನ್ ಮಾಡುವಲ್ಲಿ ನಮ್ಮಿಂದ ಏನು ಸಹಕಾರ ಬೇಕೊ ಅದನ್ನು ಖಂಡಿತವಾಗಿ ನೀಡುತ್ತೇವೆ. ಇದೊಂದು ರಾಷ್ಟ್ರೀಯ ವಿಪತ್ತಾಗಿದ್ದು, ಅಧಿಕಾರಿಗಳು ಯಾವುದೇ ಸಂದರ್ಭದಲ್ಲಿ ಕರೆದರೂ ನಾವು ಸ್ಪಂದಿಸಲು ಸಿದ್ಧರಿದ್ದೇವೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಸಂಜೆ ಕುಂದಾಪುರ […]