ಜ.31 ರ ವರೆಗೆ ಜಿಲ್ಲೆಯಲ್ಲಿ ಕೊರೋನಾ ಮಾರ್ಗಸೂಚಿ ವಿಸ್ತರಣೆ: ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ, ಕೋವಿಡ್-19 ವೈರಾಣು ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ಪರೀಕ್ಷೆ, ಪತ್ತೆ, ಚಿಕಿತ್ಸೆ, ಲಸಿಕಾಕರಣ ಮತ್ತು ಕೋವಿಡ್-19 ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದು ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದ್ದಾರೆ. ಈ ಹಿನ್ನೆಲೆ ಕೋವಿಡ್-19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ, ಕೋವಿಡ್-19 ಕಣ್ಗಾವಲು ನಿಯಂತ್ರಣ ಮತ್ತು ಜಾಗೃತಿ ಮಾರ್ಗಸೂಚಿಗಳಿಗೆ ಸಂಬoಧಿಸಿದoತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಮತ್ತು ಮಾರ್ಗಸೂಚಿಗಳನ್ನು ಜಿಲ್ಲೆಯಾದ್ಯಂತ ಜನವರಿ 31 ಬೆಳಗ್ಗೆ 5 ಗಂಟೆಯ […]