ಉಡುಪಿ ಕೋವಿಡ್ ಆಸ್ಪತ್ರೆಯ ಮಹಾ ಎಡವಟ್ಟು: ಬೇರೆಯೊಬ್ಬರ ಮೃತದೇಹದ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದ ಮನೆಯವರು.!

ಕುಂದಾಪುರ: ಕೊರೊನಾ ಸೋಂಕಿತ ವ್ಯಕ್ತಿಯ ಮೃತದೇಹದ ಬದಲು ಯುವಕನೊಬ್ಬನ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ ಘಟನೆ ಉಡುಪಿ ಡಾ. ಟಿಎಂಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ಇಂದು ನಡೆದಿದೆ. ಆಸ್ಪತ್ರೆಯ ಎಡವಟ್ಟಿನಿಂದ ಈ ವಿಚಿತ್ರ ಘಟನೆ ನಡೆದಿದ್ದು, ಕುಂದಾಪುರದ ರುದ್ರಭೂಮಿಯಲ್ಲಿ ಮೃತದೇಹ ಅದಲು ಬದಲಾಗಿರುವ ವಿಚಾರ ಬೆಳಕಿಗೆ ಬಂದಿದೆ. ಕೋಟೇಶ್ವರ ಸಮೀಪದ ನೇರಂಬಳ್ಳಿಯ 60 ವರ್ಷ ಪ್ರಾಯದ ವ್ಯಕ್ತಿ ಜು.30ರಂದು ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಉಡುಪಿಯ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆ ವ್ಯಕ್ತಿ […]