ಉಡುಪಿ: ಮುಂಬೈನಿಂದ ಬಂದ ಏಳು ವರ್ಷದ ಬಾಲಕಿ ಸಹಿತ 10 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಮುಂಬೈನಿಂದ ಉಡುಪಿ ಜಿಲ್ಲೆಗೆ ಬಂದ ಏಳು ವರ್ಷದ ಬಾಲಕಿ ಸಹಿತ ಇಂದು ಜಿಲ್ಲೆಯಲ್ಲಿ 10 ಮಂದಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿದ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ತಿಳಿದುಬಂದಿದೆ. ಸೋಂಕು ದೃಢಪಟ್ಟ 10 ಮಂದಿಯಲ್ಲಿ 9 ಮಂದಿ ಮುಂಬೈನಿಂದ ಹಾಗೂ ಒಬ್ಬರು ದೋಹಾದಿಂದ ಜಿಲ್ಲೆಗೆ ಬಂದವರಾಗಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 187ಕ್ಕೆ ಏರಿಕೆಯಾಗಿದೆ.