ಕೆಎಂಸಿಯಲ್ಲಿ ಕೋವಿಡ್ ಪರೀಕ್ಷಾ ಲ್ಯಾಬ್ ಆರಂಭಕ್ಕೆ ಕೇಂದ್ರ ಸಚಿವರೊಂದಿಗೆ ಚರ್ಚೆ: ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ ಏ.17: ಮಣಿಪಾಲದ ಕೆಎಂಸಿ ಯಲ್ಲಿ  ಕೋವಿಡ್ ಪರೀಕ್ಷಾ ಲ್ಯಾಬ್ ತೆರೆಯುವ ಬಗ್ಗೆ ಕೇಂದ್ರದ ಆರೋಗ್ಯ ಸಚಿವರೊಂದಿಗೆ ಚರ್ಚಿಸುವುದಾಗಿ ಸಂಸದೆ ಶೋಭಾ ಕರಂದ್ಲಾಜೆ  ತಿಳಿಸಿದ್ದಾರೆ. ಅವರು ಶುಕ್ರವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಕುರಿತ ತೆಗೆದುಕೊಂಡಿರುವ ಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷಾ ಲ್ಯಾಬ್ ಆರಂಭಿಸುವುದರಿಂದ ತ್ವರಿತವಾಗಿ, ಕೋವಿಡ್ ಪರೀಕ್ಷಾ ಫಲಿತಾಂಶ ಪಡೆಯಲು ಸಾಧ್ಯವಾಗಲಿದೆ ಅಲ್ಲದೇ ಜಿಲ್ಲೆಯಲ್ಲಿ  ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ತಪಾಸಣೆ ನಡೆಸಲು ಸಾಧ್ಯವಾಗಲಿದೆ, ಈ ಬಗ್ಗೆ […]