ಭಟ್ಕಳದ ಇಬ್ಬರಿಗೆ ಕೊರೊನಾ ಸೋಂಕು: ಇಬ್ಬರೂ ಬಂದದ್ದು ವಿದೇಶದಿಂದ!

ರಾಜ್ಯ: ಕೊರೋನಾ ರಾಜ್ಯದಲ್ಲಿ ತನ್ನ ಕಬಂಧಬಾಹುವನ್ನು ಇನ್ನಷ್ಟು ವಿಸ್ತರಿಸಿದ್ದು, ಭಟ್ಕಳದ ಇಬ್ಬರು ವ್ಯಕ್ತಿಗಳಿಗೆ ಇದೀಗ ಕೊರೋನಾ ಸೋಂಕು ತಗಲಿರುವುದು ದೃಢಪಟ್ಟಿದೆ. ದುಬೈನಿಂದ ಭಟ್ಕಳಕ್ಕೆ ಬಂದ ಇಬ್ಬರಲ್ಲಿ ಕೊರೊನಾ ಸೋಂಕು ದೃಡಪಟ್ಟಿದೆ ಎಂದು ಜಿಲ್ಲಾಧಿಕಾರಿ ಕೆ ಹರೀಶ್ ಕುಮಾರ್ ತಿಳಿಸಿದ್ದಾರೆ ಇಬ್ಬರಿಗೆ ಬಂತು ಕೊರೋನಾ: ಮಾರ್ಚ್ 21ಕ್ಕೆ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ 40 ವರ್ಷದ ಪುರುಷ, ತಮ್ಮದೇ ವಾಹನದಲ್ಲಿ ಸಹೋದರ ಸಂಬಂಧಿ ಭಟ್ಕಳದ ಮನೆಗೆ ಬಂದಿದ್ದರು. ನಂತರ ಅರ್ಧ ಗಂಟೆ ಮನೆಯಲ್ಲಿದ್ದು ತಾಲೂಕು ಆಸ್ಪತ್ರೆಗೆ ಬಂದು […]