ಉಡುಪಿಯಲ್ಲಿ ಮತ್ತೆ 16 ಮಂದಿ ಹೊಸ ಕೊರೊನಾ ಶಂಕಿತರು ಪತ್ತೆ: ಆಸ್ಪತ್ರೆಗೆ ದಾಖಲು
ಉಡುಪಿ: ಜಿಲ್ಲೆಯಲ್ಲಿ ಇಂದು 16 ಮಂದಿ ಕೊರೊನಾ ಶಂಕಿತರು ಪತ್ತೆಯಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಅವರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 103 ಮಂದಿ ಕೊರೊನಾ ಶಂಕಿತರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಅದರಲ್ಲಿ 80 ಮಂದಿಯ ವೈದ್ಯಕೀಯ ವರದಿ ಬಂದಿದೆ. ಓರ್ವನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಉಳಿದ 79 ಮಂದಿಯ ವರದಿಯಲ್ಲಿ […]