ಉಡುಪಿ ಜಿಲ್ಲೆಯಲ್ಲಿ ಕೊರೊನಾ ಇಲ್ಲ: ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ
ಉಡುಪಿ: ಜಿಲ್ಲೆಯಲ್ಲಿ ಈವರೆಗೆ ಯಾವುದೇ ಕೊರೊನಾ (ಕೋವಿಡ್–19) ಪ್ರಕರಣ ಪತ್ತೆಯಾಗಿಲ್ಲ. ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ದಾಖಲಾಗಿರುವ ಸಾಗರ ತಾಲ್ಲೂಕಿನ ಮಹಿಳೆಯಲ್ಲಿ ಕೊರೊನಾ ರೋಗದ ಸೋಂಕು ಇಲ್ಲ ಎಂದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದ್ದು, ವಯೋಸಹಜ ಇತರೆ ಆರೋಗ್ಯ ಸಮಸ್ಯೆಗಳಿಂದ ದಾಖಲಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.