ಭಾರತದಲ್ಲಿ 11 ಸಾವಿರ ಗಡಿದಾಟಿದ ಕೊರೊನಾ ಸೋಂಕಿತರ ಸಂಖ್ಯೆ: ಮಾಹಿತಿ ಬಿಡುಗಡೆಗೊಳಿಸಿದ ಆರೋಗ್ಯ ಸಚಿವಾಲಯ

ನವದೆಹಲಿ:  ದೇಶದಲ್ಲಿ ಕೊರೊನಾ ಮಹಾಮಾರಿ  ಸೋಂಕಿಗೆ ಒಳಗಾದವರ ಸಂಖ್ಯೆ 11,933ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಸಂಜೆ ತಿಳಿಸಿದೆ. ಕೊರೊನಾ ಸೋಂಕಿಗೆ ಇದುವರೆಗೆ 392 ಮಂದಿ ಮೃತಪಟ್ಟಿದ್ದಾರೆ. ಹಾಗೂ 10,197 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 1,344 ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.