ಕೊರೊನಾ ವೈರಸ್: ಆತಂಕ ಬೇಡ ಮುಂಜಾಗ್ರತಾ ಕ್ರಮ ವಹಿಸಿ: ಕೋಟ
ಮಂಗಳೂರು: ಚೀನಾ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಕೊರೋನಾ ವೈರಸ್ ರೋಗ ಹಬ್ಬಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಾರ್ವಜನಿಕರು ಯಾವುದೇ ಭಯ, ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಆದರೆ, ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ತುರ್ತು ಸಭೆ ನಡೆಸಿ, ರಾಜ್ಯದಲ್ಲಿ ಈ ರೋಗದಿಂದ ಬಾಧಿತರಾದ ಯಾವುದೇ ಮಾಹಿತಿ ಇದುವರೆಗೆ ಇಲ್ಲ. ಆದರೂ, ದ.ಕ. ಜಿಲ್ಲೆಯ ಪಕ್ಕದ ಕೇರಳ ರಾಜ್ಯದಲ್ಲಿ ಇದು ಕಂಡು ಬಂದಿರುವ […]