ರಾಜ್ಯದಲ್ಲಿ ಕೊರೋನಾ ಇಳಿಕೆ: ಸಹಜ ಸ್ಥಿತಿಗೆ ಮರಳುತ್ತಿವೆ ಜಿಲ್ಲೆಗಳು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 310 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 29,82,399ಕ್ಕೆ ಏರಿಕೆಯಾಗಿದೆ. 347 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾರೇ ಗುಣಮುಖರಾದವರ ಸಂಖ್ಯೆ 29,34,870ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 9,578 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ