ಮುಂದಿನ 6 ದಿನಗಳಲ್ಲಿ ಕರಾವಳಿಯಲ್ಲಿ ಭಾರೀ ಮಳೆ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ: ಕರಾವಳಿಯ ವಿವಿದೆಡೆ ಮುಂದಿನ ಆರು ದಿನಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ಕಡಲ ತೀರಗಳಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದ್ದು ಪ್ರವಾಸಿಗರ ಕುರಿತುನಿಗಾವಹಿಸುವಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಇಳಿಮುಖವಾಗಿದ್ದು ಇನ್ನಾದರೂ ನಿರೀಕ್ಷಿತ ಮಟ್ಟದಲ್ಲಿ ಮಳೆ ಸುರಿಯಲಿದೆಯಾ ಎನ್ನುವ ನಿರೀಕ್ಷೆ ಮೂಡಿಸಿದೆ.