ಸರ್ಕಾರಕ್ಕೆ ಹೈಕೋರ್ಟ್ ತರಾಟೆ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯದ ಕೊರತೆ:
ಬೆಂಗಳೂರು: ಈ ರೀತಿಯ ಸೌಲಭ್ಯಗಳ ಕೊರತೆ ಇರುವ ಶಾಲೆಗಳಿಗೆ ಯಾವ ಪೋಷಕರು ತಾನೇ ಮಕ್ಕಳನ್ನು ಕಳುಹಿಸಲು ಮುಂದಾಗುತ್ತಾರೆ ಎಂದು ರಾಜ್ಯ ಹೈಕೋರ್ಟ್ ಅಸಮಾಧಾನ ಹೊರಹಾಕಿದೆ. ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಐ) ಮಾನದಂಡಗಳಿಗೆ ಅನುಗುಣವಾಗಿ ಶೌಚಾಲಯ ಸೇರಿದಂತೆ ಮೂಲಸೌಲಭ್ಯಗಳನ್ನು ಕಲ್ಪಿಸದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಸರ್ಕಾರಿ ಶಾಲೆಗಳಲ್ಲಿ ಸೌಲಭ್ಯಗಳ ಕೊರತೆ ವಿಷಯವಾಗಿ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ‘ಶಾಲೆಯಿಂದ ಹೊರಗುಳಿದ ಮಕ್ಕಳು’ – ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ […]