ಜ. 4 ರಂದು ಕೋವಾಕ್ಸಿನ್ ಮುನ್ನೆಚ್ಚರಿಕಾ ಡೋಸ್ ಲಸಿಕಾ ಮೇಳ
ಉಡುಪಿ: ಚೀನಾ, ರಿಪಬ್ಲಿಕ್ ಆಫ್ ಕೊರಿಯಾ, ಜಪಾನ್, ಯು.ಎಸ್.ಎ, ಬ್ರೆಝಿಲ್ ದೇಶಗಳಲ್ಲಿ ಈಗಾಗಲೇ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ನಾಲ್ಕನೆ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 4 ರಂದು ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಕೋವಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ. ಕೋವಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು, 2ನೇ ಡೋಸ್ ಕೋವಾಕ್ಸಿನ್ ಲಸಿಕೆ ಪಡೆಯಲು ಮತ್ತು 2ನೇ ಡೋಸ್ ಕೋವಾಕ್ಸಿನ್ ಲಸಿಕೆ ಪಡೆದು 6 ತಿಂಗಳು ಪೂರೈಸಿದವರು […]
18 ವರ್ಷ ಮೇಲ್ಪಟ್ಟ ಬೂಸ್ಟರ್ ಡೋಸ್ ಅರ್ಹತೆಯುಳ್ಳವರಿಗೆ ಬಹು ಆಯ್ಕೆ ಲಭ್ಯ: ಕೋರ್ಬೆವಾಕ್ಸ್ ಪರಿಗಣಿಸಲು ಕೇಂದ್ರ ಮಾರ್ಗಸೂಚಿ
ನವದೆಹಲಿ: 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಜನರಿಗೆ ಕೋರ್ಬೆವಾಕ್ಸ್ ನೊಂದಿಗೆ ಮುನ್ನೆಚ್ಚರಿಕಾ(ಬೂಸ್ಟರ್) ಡೋಸ್ ನ ಭಿನ್ನ ಆಯ್ಕೆಯು ಲಭ್ಯವಿರುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮಾತನಾಡಿ, 18 ವರ್ಷ ಮೇಲ್ಪಟ್ಟ ಜನರಿಗೆ ಕೋವಾಕ್ಸಿನ್ ಅಥವಾ ಕೋವಿಶೀಲ್ಡ್ ಲಸಿಕೆಗಳ ಎರಡನೇ ಡೋಸ್ ನೀಡಿದ ದಿನಾಂಕದಿಂದ ಆರು ತಿಂಗಳ ನಂತರ ಮುನ್ನೆಚ್ಚರಿಕಾ ಡೋಸ್ ಆಗಿ ಕೋರ್ಬೆವಾಕ್ಸ್ ಲಭ್ಯವಿರುತ್ತದೆ ಎಂದು ಹೇಳಿದ್ದಾರೆ. ಅಂದರೆ, ಈ ಹಿಂದೆ ಕೋವಾಕ್ಸಿನ್ ಅಥವಾ ಕೋವಿಶೀಲ್ಡ್ ನ ಎರಡೂ ಡೋಸೇಜ್ […]
ಅಂತಿಮ ಹಂತದಲ್ಲಿವೆ ಕೋವೊವಾಕ್ಸ್ ಲಸಿಕಾ ಪ್ರಯೋಗಗಳು: 18 ವರ್ಷ ಕೆಳಗಿನ ಮಕ್ಕಳಿಗೆ ಜೂನ್ ವರೆಗೆ ದೊರೆಯಬಹುದು ಲಸಿಕೆ
ದೆಹಲಿ: 18 ವರ್ಷ ಮೇಲ್ಪಟ್ಟವರಿಗೆಲ್ಲ ಈಗಾಗಲೇ ಕೋವಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ನೀಡಲಾಗಿದ್ದು, ಪುಟಾಣಿ ಮಕ್ಕಳಿಗೆ ಇನ್ನೂ ಲಸಿಕೆಗಳನ್ನು ನೀಡಲಾಗಿಲ್ಲ. ಚಿಕ್ಕ ಮಕ್ಕಳಲ್ಲಿ ಕೋವಿಡ್ ವಿರುದ್ದದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕೋವೊವಾಕ್ಸ್ ಲಸಿಕೆಗಳನ್ನು ತಯಾರಿಸಲಾಗುತ್ತಿದೆ. ಲಸಿಕೆಗಳನ್ನು ಪ್ರಾಯೋಗಿಕ ಪರೀಕ್ಷೆಗಳಿಗೆ ಒಳಪಡಿಸಲಾಗುತ್ತಿದ್ದು, ಮಕ್ಕಳ ಮೇಲೆ ವೈದ್ಯಕೀಯ ಪ್ರಯೋಗಗಳನ್ನು ಕೈಗೊಳ್ಳಲಾಗುತ್ತಿದೆ. ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಕಂಪನಿಯು ಕೋವೊವಾಕ್ಸ್ ಲಸಿಕೆಗಳನ್ನು ತಯಾರಿಸುವ ಹೊಣೆ ಹೊತ್ತಿದೆ. ಅಮೇರಿಕಾದ ಜೈವಿಕ ತಂತ್ರಜ್ಞಾನ ಸಂಸ್ಥೆಯು ಅಭಿವೃದ್ದಿ ಪಡಿಸಿರುವ ನೋವೋವಾಕ್ಸ್ (ಮರುಸಂಯೋಜಕ ನ್ಯಾನೊಪಾರ್ಟಿಕಲ್ […]