ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ತೀವ್ರ ಕೋವಿಡ್ ನಿಂದ ಬಳಲಿದವರು ಶ್ರಮದಾಯಕ ವ್ಯಾಯಾಮದಿಂದ ದೂರವಿರಲು ಸೂಚನೆ
ನವದೆಹಲಿ: ಇತ್ತೀಚಿನ ತಿಂಗಳುಗಳಲ್ಲಿ ಯುವಜನರಲ್ಲಿ ಹೃದಯಾಘಾತ ಹೆಚ್ಚುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಅವರು ತೀವ್ರವಾದ ಕೋವಿಡ್ -19 ಸೋಂಕಿನಿಂದ ಬಳಲಿದ್ದವರು ವ್ಯಾಯಾಮ ಮಾಡುವಾಗ ಹೆಚ್ಚು ಶ್ರಮಪಡಬಾರದು ಮತ್ತು ಸ್ವಲ್ಪ ಸಮಯದವರೆಗೆ ಕಠಿಣ ಪರಿಶ್ರಮದಿಂದ ದೂರವಿರಬೇಕು ಎಂದು ಸಲಹೆ ನೀಡಿದ್ದಾರೆ. ಗುಜರಾತ್‌ನ ಭಾವನಗರದಲ್ಲಿ ಭಾನುವಾರ ನಡೆದ ಕಾರ್ಯಕ್ರಮದ ನೇಪಥ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಂಡವಿಯಾ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಈ ವಿಷಯದ ಬಗ್ಗೆ […]
ಇಂದು ಬೂಸ್ಟರ್ ಡೋಸ್ ಲಸಿಕಾ ಮೇಳ: ಕೋವಿಶೀಲ್ಡ್ ಲಭ್ಯ
ಉಡುಪಿ: ಕೋವಿಡ್-19 ನಾಲ್ಕನೇ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 18 ರಂದು ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ. ಕೋವಿಶೀಲ್ಡ್ ಪ್ರಥಮ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರಿಗೆ 2 ನೇ ಡೋಸ್ ಕೋವಿಶೀಲ್ಡ್ ಲಸಿಕೆ, ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು, 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆಯಬಹುದಾಗಿದೆ. 2ನೇ ಡೋಸ್ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ […]
ಜ. 4 ರಂದು ಕೋವಾಕ್ಸಿನ್ ಮುನ್ನೆಚ್ಚರಿಕಾ ಡೋಸ್ ಲಸಿಕಾ ಮೇಳ
ಉಡುಪಿ: ಚೀನಾ, ರಿಪಬ್ಲಿಕ್ ಆಫ್ ಕೊರಿಯಾ, ಜಪಾನ್, ಯು.ಎಸ್.ಎ, ಬ್ರೆಝಿಲ್ ದೇಶಗಳಲ್ಲಿ ಈಗಾಗಲೇ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ನಾಲ್ಕನೆ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 4 ರಂದು ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಕೋವಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ. ಕೋವಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು, 2ನೇ ಡೋಸ್ ಕೋವಾಕ್ಸಿನ್ ಲಸಿಕೆ ಪಡೆಯಲು ಮತ್ತು 2ನೇ ಡೋಸ್ ಕೋವಾಕ್ಸಿನ್ ಲಸಿಕೆ ಪಡೆದು 6 ತಿಂಗಳು ಪೂರೈಸಿದವರು […]
ಕೋವಿಡ್ ಹಿನ್ನೆಲೆ: ಜಿಲ್ಲಾಡಳಿತದಿಂದ ಹೊಸವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ
ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ಹೊಸ ವರ್ಷದ ಆಚರಣೆ ಹಾಗೂ ಇತರೆ ಸಮಾರಂಭಗಳಲ್ಲಿ ಸಾರ್ವಜನಿಕರು ಗುಂಪಾಗಿ ಸೇರುವುದರಿಂದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಸಾಧ್ಯವಾಗದೇ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಾಗಿರುವ ಹಿನ್ನೆಲೆ, ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಹಾಗೂ ಕೋವಿಡ್ -19 ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೆ ಈ ಕೆಳಕಂಡ ನಿಬಂಧನೆಗಳನ್ನು ವಿಧಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ. ಹೊಸ ವರ್ಷಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 31 ರಿಂದ ಜನವರಿ 2 ರ ವರೆಗೆ […]
ಜಿಲ್ಲಾಧಿಕಾರಿ ಕೂರ್ಮಾ ರಾವ್ ಜಿಲ್ಲಾಸ್ಪತ್ರೆ ಭೇಟಿ: ಕೋವಿಡ್ ಸಿದ್ದತೆ ಪರಿಶೀಲನೆ
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ನಿರ್ವಹಣೆ ಕುರಿತಂತೆ ಪೂರ್ವಬಾವಿಯಾಗಿ ಕೈಗೊಂಡಿರುವ ಸಿದ್ದತೆಗಳ ಕುರಿತು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಬುಧವಾರ ಉಡುಪಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿನ ಆಕ್ಸಿಜಿನ್ ಘಟಕಗಳ ಕಾರ್ಯನಿರ್ವಹಣೆ, ಪೂರೈಕೆ, ವೆಂಟಿಲೇಟರ್ ಗಳ ಸುಸ್ಥಿತಿ ಹಾಗೂ ಕೋವಿಡ್ ಪರೀಕ್ಷಾ ಲ್ಯಾಬ್‍ನ ಸಮರ್ಪಕ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲಿಸಿದರು. ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಉಪಸ್ಥಿತರಿದ್ದರು.