ಮುಚ್ಚಿದ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ; ಕೋವಿನ್ ನಲ್ಲಿ ಮೂಗಿನ ಲಸಿಕೆ ಇಂಕೋವಾಕ್ ಲಭ್ಯ

ಬೆಂಗಳೂರು: ಚೀನಾ ಸೇರಿದಂತೆ ವಿಶ್ವದ ಕೆಲವು ಭಾಗಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಫ್ಲ್ಯೂ ಮಾದರಿ ಮತ್ತು ತೀವ್ರ ಉಸಿರಾಟದ ಕಾಯಿಲೆಗೆ ಕಡ್ಡಾಯ ಕೋವಿಡ್ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಸರ್ಕಾರ ಗುರುವಾರ ನಿರ್ಧರಿಸಿದೆ. ರಾಜ್ಯಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಶೇಕಡಾ ಎರಡರಷ್ಟು ಯಾದೃಚ್ಛಿಕ ಪರೀಕ್ಷೆಯು ಕೇಂದ್ರದಿಂದ ಪರಿಷ್ಕೃತ ನಿರ್ದೇಶನಗಳವರೆಗೆ ಮುಂದುವರಿಯುತ್ತದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಮುಚ್ಚಿದ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಪಬ್‌ಗಳು, ಬಾರ್‌ಗಳು, ಕಚೇರಿಗಳು, ರೆಸ್ಟೋರೆಂಟ್‌ಗಳು, ಮಾಲ್‌ಗಳು, ಬಸ್‌ಗಳು, […]

ಜಾಗತಿಕವಾಗಿ ಹೆಚ್ಚುತ್ತಿರುವ ಕೋವಿಡ್ ಸಾಂಕ್ರಾಮಿಕ: ರೂಪಾಂತರಗಳ ಮೇಲೆ ನಿಗಾ ಇಡಲು ರಾಜ್ಯಗಳಿಗೆ ಕೇಂದ್ರ ಸೂಚನೆ

ನವದೆಹಲಿ: ಜಪಾನ್, ದಕ್ಷಿಣ ಕೊರಿಯಾ, ಬ್ರೆಜಿಲ್, ಚೀನಾ ಮತ್ತು ಅಮೇರಿಕಾದಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಹೊಸ ಏರಿಕೆಯ ಮಧ್ಯೆ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ಸಾಂಕ್ರಾಮಿಕ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಂತಾರಾಷ್ಟ್ರೀಯ ಸನ್ನಿವೇಶವನ್ನು ಪರಿಗಣಿಸಿ ಸಚಿವರು ಬುಧವಾರದಂದು ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ ಎನ್ನಲಾಗಿದೆ. ಮಂಗಳವಾರದಂದು, ಆರೋಗ್ಯ ಸಚಿವಾಲಯವು ಹೊಸ ರೂಪಾಂತರಗಳ ಬಗ್ಗೆ ನಿಗಾ ಇಡಲು ಸಕಾರಾತ್ಮಕ ಮಾದರಿಗಳ ಸಂಪೂರ್ಣ ಜೀನೋಮ್ ಅನುಕ್ರಮವನ್ನು ಪತ್ತೆ ಹಚ್ಚಲು ಎಲ್ಲಾ ರಾಜ್ಯಗಳಿಗೆ […]

ಕೋವಿಶೀಲ್ಡ್ ಲಸಿಕೆಯು ಪುರುಷ ಫಲವತ್ತತೆಯ ಸಾಮರ್ಥ್ಯಕ್ಕೆ ಹಾನಿಕಾರಕವಲ್ಲ: ಕಸ್ತೂರ್ಬಾ ವೈದ್ಯಕೀಯ ತಂಡದ ಸಂಶೋಧನೆ

ಮಣಿಪಾಲ: ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಭಾರತೀಯ ಫಲವತ್ತತೆ ತಜ್ಞರ ತಂಡವು ಇದೆ ಮೊದಲ ಬಾರಿಗೆ ಕೋವಿಶೀಲ್ಡ್ ಲಸಿಕೆಗಳನ್ನು ಪಡೆದ ಪುರುಷರಲ್ಲಿ ವೀರ್ಯದ ಗುಣಮಟ್ಟದಲ್ಲಿನ ಬದಲಾವಣೆಗಳ ಪ್ರಾಯೋಗಿಕ ಸಂಶೋಧನೆ ನಡೆಸಿದೆ. ಸಂಶೋಧನಾ ವರದಿಯನ್ನು ಸೆ 5 ರಂದು ಯುಕೆ ಮೂಲದ ಸೊಸೈಟಿ ಫಾರ್ ರಿಪ್ರೊಡಕ್ಷನ್ ಎಂಡ್ ಫರ್ಟಿಲಿಟಿ ಜರ್ನಲ್ ನಲ್ಲಿ ಪ್ರಕಟಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ನಂತರ ಪುರುಷರಲ್ಲಿ ಫಲವತ್ತತೆ ನಶಿಸಿ ಹೋಗುತ್ತದೆ ಎಂಬ ವರದಿಗಳನ್ನು ಆಧರಿಸಿ ಬಹುತೇಕ ಪುರುಷರು ಲಸಿಕೆಯನ್ನು ತೆಗೆದುಕೊಳ್ಳಲು ಹಿಂದೇಟು ಹಾಕಿದ್ದರು. ಲಸಿಕೆಯು ಪುರುಷರ […]

ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳ ವಾರಸುದಾರರು ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಆಗಸ್ಟ್ 23 ಕೊನೆಯ ದಿನ

ಉಡುಪಿ: ಕೋವಿಡ್-19 ವೈರಾಣು ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕಾನೂನುಬದ್ಧ ವಾರಸುದಾರರು ಪರಿಹಾರ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನ ಮೇ 15 ಕ್ಕಿಂತ ಮೊದಲು ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳ ಪ್ರಕರಣದಲ್ಲಿ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಆಗಸ್ಟ್ 23 ಕೊನೆಯ ದಿನವಾಗಿದ್ದು, ಮೇ 16 ರ ನಂತರ ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳಿಗೆ ಸಂಬಂಧಿಸಿದಂತೆ ಪರಿಹಾರ ಪಡೆಯಲು 90 ದಿನಗಳ ಕಾಲಮಿತಿ ನಿಗದಿಪಡಿಸಲಾಗಿದೆ. ಪ್ರಯೋಗಾಲಯದಿಂದ ಪಡೆದಿರುವ ಮೃತ ವ್ಯಕ್ತಿಯ ಪಾಸಿಟಿವ್ ರಿಪೋರ್ಟ್, ಸಂಬಂಧಿಸಿದ ಆಸ್ಪತ್ರೆಯ ರಿಪೋರ್ಟ್, ಕೋವಿಡ್ ದೃಢಪಟ್ಟ ರೋಗಿ […]

18 ವರ್ಷ ಮೇಲ್ಪಟ್ಟ ಬೂಸ್ಟರ್ ಡೋಸ್ ಅರ್ಹತೆಯುಳ್ಳವರಿಗೆ ಬಹು ಆಯ್ಕೆ ಲಭ್ಯ: ಕೋರ್ಬೆವಾಕ್ಸ್ ಪರಿಗಣಿಸಲು ಕೇಂದ್ರ ಮಾರ್ಗಸೂಚಿ

ನವದೆಹಲಿ: 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಜನರಿಗೆ ಕೋರ್ಬೆವಾಕ್ಸ್ ನೊಂದಿಗೆ ಮುನ್ನೆಚ್ಚರಿಕಾ(ಬೂಸ್ಟರ್) ಡೋಸ್ ನ ಭಿನ್ನ ಆಯ್ಕೆಯು ಲಭ್ಯವಿರುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮಾತನಾಡಿ, 18 ವರ್ಷ ಮೇಲ್ಪಟ್ಟ ಜನರಿಗೆ ಕೋವಾಕ್ಸಿನ್ ಅಥವಾ ಕೋವಿಶೀಲ್ಡ್ ಲಸಿಕೆಗಳ ಎರಡನೇ ಡೋಸ್ ನೀಡಿದ ದಿನಾಂಕದಿಂದ ಆರು ತಿಂಗಳ ನಂತರ ಮುನ್ನೆಚ್ಚರಿಕಾ ಡೋಸ್ ಆಗಿ ಕೋರ್ಬೆವಾಕ್ಸ್ ಲಭ್ಯವಿರುತ್ತದೆ ಎಂದು ಹೇಳಿದ್ದಾರೆ. ಅಂದರೆ, ಈ ಹಿಂದೆ ಕೋವಾಕ್ಸಿನ್ ಅಥವಾ ಕೋವಿಶೀಲ್ಡ್ ನ ಎರಡೂ ಡೋಸೇಜ್ […]