ಮನೆ ಮನೆಗೆ ಲಸಿಕಾ ಮಿತ್ರ 2.0 ; ಬುಧವಾರದಂದು ಕೋವಿಡ್ ಲಸಿಕಾ ಮೇಳ: ನಾಲ್ಕನೇ ಅಲೆಯನ್ನೆದುರಿಸಲು ಜಿಲ್ಲಾಡಳಿತ ಸಜ್ಜು
ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸಂಭಾವ್ಯ 4 ನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಲಸಿಕೀಕರಣ ಪ್ರಗತಿಯ ವೇಗವನ್ನು ಹೆಚ್ಚಿಸಬೇಕಾಗಿದ್ದು, ಇದಕ್ಕಾಗಿ ಮನೆ ಮನೆಗೆ ಲಸಿಕಾ ಮಿತ್ರ 2.0 ಲಸಿಕಾಕರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ಕೋವಿಡ್ ಲಸಿಕೀಕರಣವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಆಶಾ ಕಾರ್ಯಕರ್ತೆಯರು ಮನೆ ಭೇಟಿ ನಡೆಸಿ , 12-14 ವಯಸ್ಸಿನ ಮಕ್ಕಳು, 15-17 ವಯಸ್ಸಿನ ಮಕ್ಕಳು, 18 ವರ್ಷ ಮೇಲ್ಪಟ್ಟ ನಾಗರಿಕರು ಪ್ರಥಮ ಹಾಗೂ ದ್ವಿತೀಯ ಡೋಸ್ ಪಡೆಯಲು ಬಾಕಿ ಇರುವವರು, 60 ವರ್ಷ […]
ಶಿಲೀಂಧ್ರ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ: ಪಕ್ಷದಿಂದ ಮಾಹಿತಿ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಸ್ತುತ ಕೋವಿಡ್ ನಂತರದ ಇತರ ರೋಗಲಕ್ಷಣಗಳ ಜೊತೆಗೆ ಅವರ ಕೆಳ ಶ್ವಾಸೇಂದ್ರಿಯ ಪ್ರದೇಶದಲ್ಲಿ ಪತ್ತೆಯಾದ ಶಿಲೀಂಧ್ರಗಳ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆಯನ್ನು ನಿಕಟವಾಗಿ ಗಮನಿಸಲಾಗುತ್ತಿದೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಕೋವಿಡ್ ಎದುರಿಸಲು ಸರ್ವ ಸನ್ನದ್ಧರಾಗಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದಲ್ಲಿ, ಅದನ್ನು ಎದುರಿಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿ ಸರ್ವ ಸನ್ನದ್ದರಾಗಿರಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ, ಜಿಲ್ಲೆಯಲ್ಲಿನ ಕೋವಿಡ್-19, ಡೆಂಗ್ಯೂ ಮತ್ತು ಮಲೇರಿಯಾ ಪ್ರಕರಣಗಳ ಪ್ರಸಕ್ತ ಪರಿಸ್ಥಿತಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಂಡು ಬಂದರೆ ಆ ಪ್ರದೇಶದಲ್ಲಿ ಹೆಚ್ಚಿನ ಟೆಸ್ಟಿಂಗ್ ಮತ್ತು ಸೋಂಕಿತರ ಸಂಪರ್ಕಿತರನ್ನು ಪತ್ತೆ […]
ಬದಲಾದ ಸನ್ನಿವೇಶದಲ್ಲಿ ವಿದ್ಯಾರ್ಥಿಗಳ ಮನಸ್ಥಿತಿಗೆ ಅನುಗುಣವಾಗಿ ಶಿಕ್ಷಕರು ಮತ್ತು ಹೆತ್ತವರು ಬದಲಾಗಬೇಕು- ಡಾ. ನಿಕೇತನ
ಉದ್ಯಾವರ: ಇಂದಿನ ಆಧುನಿಕ ಕಾಲದಲ್ಲಿ ಮಕ್ಕಳ ಮನಸ್ಥಿತಿ ಬದಲಾಗಿದೆ. ಅದರಲ್ಲೂ ಕೋವಿಡ್ – 19 ರಿಂದಾಗಿ ಮಕ್ಕಳು ತಂತ್ರಜ್ಞಾನಕ್ಕೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಜಗತ್ತೇ ಒಂದು ಹಳ್ಳಿಯಾಗಿರುವ ಜಾಗತೀಕರಣದ ಸಂದರ್ಭದಲ್ಲಿ ಮಕ್ಕಳ ಮನಸ್ಥಿತಿಯು ಅದಕ್ಕೆ ಅನುಗುಣವಾಗಿ ಬೆಳೆಯುತ್ತಿದೆ. ಈ ಸನ್ನಿವೇಶದಲ್ಲಿ ಶಿಕ್ಷಕರು ಮತ್ತು ಹೆತ್ತವರು ಕೂಡಾ ತಮ್ಮ ಮನೋಭಾವವನ್ನು ನವೀಕರಿಸಿಕೊಳ್ಳ ಬೇಕಾಗಿದೆ. ಇಲ್ಲವಾದಲ್ಲಿ ಮಕ್ಕಳ ಮನಸ್ಥಿತಿಯೊಂದಿಗೆ ಶಿಕ್ಷಕರ ಮನಸ್ಥಿತಿ ಘರ್ಷಿಸುವ ಹಂತ ತಲುಪಿದರೆ ಇದು ಮಕ್ಕಳ ಮನಸ್ಥಿತಿಯ ಮೇಲೆ ಋಣಾತ್ಮಕ ಪರಿಣಾಮ ಬೀರಿ ಅವರ ಶಿಕ್ಷಣ ಕುಂಠಿತವಾಗುವ ಅಪಾಯವಿದೆ […]
ಕೋವಿಡ್-19 ಸಂಬಂಧಿತ ಆರೋಗ್ಯ ಸಮಸ್ಯೆ: ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ನವದೆಹಲಿ: ಭಾನುವಾರ, ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಕೋವಿಡ್-19 ಸಂಬಂಧಿತ ಸಮಸ್ಯೆಗಳಿಗಾಗಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ. ಸೋನಿಯಾ ಗಾಂಧಿ ಈ ತಿಂಗಳ ಆರಂಭದಲ್ಲಿ ಕೋವಿಡ್ ಸೋಂಕಿನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ಕಂಡುಬಂದಿದ್ದರು. ಸೋನಿಯಾ ಗಾಂಧಿಗೆ ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲು ಜೂನ್ 23 ರಂದು ಹೊಸ ದಿನಾಂಕವನ್ನು ನೀಡಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಅವರ […]