ಜಿಲ್ಲೆಯಲ್ಲಿ ಜ.10 ರಿಂದ ಕೋವಿಡ್-19 ಮುನ್ನೆಚ್ಚರಿಕಾ ಡೋಸ್: ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯಲ್ಲಿನ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳಿಗೆ ಜನವರಿ 10 ರಿಂದ ಕೋವಿಡ್ -19 ಮುನ್ನೆಚ್ಚರಿಕಾ ಡೋಸ್ ನೀಡಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ತಿಳಿಸಿದರು. ಅವರು ಇಂದು ವರ್ಚುವಲ್ ಸಭೆಯ ಮೂಲಕ, ಕೋವಿಡ್ 19 ಮುನ್ನೆಚ್ಚರಿಕಾ ಡೋಸ್ ನೀಡಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು.   […]