ದೇಶದಲ್ಲಿ ಕಳೆದ 24 ಗಂಟೆಯಲ್ಲಿ 72 ಹೊಸ ಕೋವಿಡ್ ಪ್ರಕರಣ ದಾಖಲು
ನವದೆಹಲಿ: ಭಾರತದಲ್ಲಿ ಒಂದೇ ದಿನದಲ್ಲಿ 72 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸದ್ಯ ದೇಶದಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 348 ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ದತ್ತಾಂಶವನ್ನು ಬಿಡುಗಡೆ ಮಾಡಿದೆ.ಕೋವಿಡ್ ಹೊಸ ರೂಪಾಂತಾರಿ ತಳಿಗಳಿಂದಾಗಿ ಭಾರತ ಸೇರಿದಂತೆ ಹಲವು ದೇಶದಲ್ಲಿ ಸೋಂಕಿನ ಪ್ರಕರಣಗಳ ಏರಿಕೆ ಕಾಣುತ್ತಿವೆ. ಭಾರತ ಸೇರಿದಂತೆ ಜಗತ್ತಿನೆಲ್ಲೆಡೆ ಕೋವಿಡ್ನ ಹೊಸ ಉಪತಳಿಗಳಾದ ಏರಿಸ್, ಎಕ್ಸ್ಬಿಬಿ ಸೇರಿದಂತೆ ಹಲವು ತಳಿಗಳು ಹೊಸ ಸೋಂಕಿನ ಪ್ರಕರಣಗಳಿಗೆ ಕಾರಣವಾಗಿದೆ. ಈ ಸೋಂಕುಗಳಿಂದ ಪ್ರಕರಣಗಳು ದಾಖಲಾಗುತ್ತಿದ್ದರೂ, […]