ಕೊರೊನಾ ರೋಗಿಗೆ 5 ಲಕ್ಷ ಬಿಲ್: ಅಪೋಲೋ ಆಸ್ಪತ್ರೆ ವಿರುದ್ಧ ಸೂಕ್ತ ಕ್ರಮ: ಸಚಿವ ಕೆ. ಸುಧಾಕರ್

ಬೆಂಗಳೂರು: ಬೆಂಗಳೂರಿನ ಶೇಷಾದ್ರಿಪುರಂನ ಖಾಸಗಿ ಅಪೋಲೋ ಆಸ್ಪತ್ರೆ ಕೊರೊನಾ ರೋಗಿಯೊಬ್ಬರಿಗೆ ಐದು ಲಕ್ಷ ರೂಪಾಯಿ ಬಿಲ್ ಮಾಡಿರುವುದಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಕಿಡಿಕಾರಿದ್ದಾರೆ. ಈ ಹಿಂದೆ ಅನೇಕ ಬಾರಿ ಅಪೋಲೋ ಆಸ್ಪತ್ರೆಗೆ ವಾರ್ನ್‌ ಮಾಡಿದ್ದೇನೆ. ಆದರೂ ಕೂಡ ಇಂದು ಕೊರೊನಾ ರೋಗಿಗೆ 5 ಲಕ್ಷ ಬಿಲ್‌ ಮಾಡಿದ್ದಾರೆ ಎನ್ನುವ ಸುದ್ದಿ ಕೇಳಿ ಆಘಾತವಾಯಿತು ಎಂದು ತಿಳಿಸಿದರು. ಅಪೋಲೋ ಆಸ್ಪತ್ರೆಯ ಆಡಳಿತ ಮಂಡಳಿಯು ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಗಾಳಿಗೆ ತೂರುತ್ತಿದೆ. ನಿಗದಿ ಮಾಡಿದ ದರಕ್ಕಿಂತಲೂ ಹೆಚ್ಚು […]