ಮೋದಿ ಸರ್ಕಾರ ಕೋವಿಡ್ ಲಸಿಕೆ ಪೂರೈಕೆಯನ್ನು ತನಗೆ ಬೇಕಾದಂತೆ ನಿಯಂತ್ರಿಸುತ್ತಿದೆ: ಮನೀಶ್ ಸಿಸೋಡಿಯಾ
ದೆಹಲಿ: ಕೇಂದ್ರ ಸರ್ಕಾರ ಕೋವಿಡ್ ಲಸಿಕೆ ಪೂರೈಕೆಯನ್ನು ತನಗೆ ಬೇಕಾದಂತೆ ನಿಯಂತ್ರಿಸುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬುಧವಾರ ಹೇಳಿದ್ದಾರೆ ರಾಷ್ಟ್ರ ರಾಜಧಾನಿಗೆ “ಹೆಚ್ಚುವರಿ” ಕೋವಾಕ್ಸಿನ್ ಡೋಸ್ ನೀಡಲು ಸಾಧ್ಯವಿಲ್ಲ ಎಂದು ಲಸಿಕೆ ತಯಾರಕ ಭಾರತ್ ಬಯೋಟೆಕ್ ದೆಹಲಿ ಸರ್ಕಾರಕ್ಕೆ ತಿಳಿಸಿದೆ ಇದು ಕೇಂದ್ರ ಸರ್ಕಾರ ಕೋವಿಡ್ ಲಸಿಕೆ ಪೂರೈಕೆ ನಿಯಂತ್ರಿಸುತ್ತಿರುವುದಕ್ಕೆ ಉದಾಹರಣೆ ಎಂದವರು ಹೇಳಿದ್ದಾರೆ. ದೆಹಲಿಯಲ್ಲಿ ಕೋವಾಕ್ಸಿನ್ ದಾಸ್ತಾನು ಮುಗಿದಿದೆ. 17 ಶಾಲೆಗಳಲ್ಲಿ ಸ್ಥಾಪಿಸಲಾದ ಸುಮಾರು 100 ವ್ಯಾಕ್ಸಿನೇಷನ್ ಕೇಂದ್ರಗಳನ್ನು ಬಂದ್ ಮಾಡಲಾಗಿದೆ ಎಂದು […]