ಕೋವಿಡ್-19 ಮಾಹಿತಿಗಾಗಿ ವೆಬ್‍ಸೈಟ್ ಹಾಗೂ ಕೂಲಿ ಕಾರ್ಮಿಕರ ಹಸಿವು ಇಂಗಿಸಲು ಶುಲ್ಕ-ರಹಿತ ದೂರವಾಣಿ ಲೋಕಾರ್ಪಣೆ

ಮುಖ್ಯಮಂತ್ರಿಯವರ ಸೂಚನೆಯ ಮೇರೆಗೆ, ಕರ್ನಾಟಕದಲ್ಲಿ ಕೊರೊನಾ ವೈರಾಣು 19 (ಕೋವಿಡ್-19) ಕುರಿತ ಅಧಿಕೃತ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ  ರೂಪಿಸಿರುವ ವೆಬ್‍ಸೈಟ್ ಹಾಗೂ ಅನ್ನವಿಲ್ಲದ ಬಡ ಕೂಲಿ ಕಾರ್ಮಿಕರ ಹಸಿವು ಇಂಗಿಸಲು ಕಾರ್ಮಿಕ ಇಲಾಖೆ ಸ್ಥಾಪಿಸಿರುವ ಶುಲ್ಕ-ರಹಿತ ದೂರವಾಣಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಅವರು  ಶನಿವಾರ ಲೋಕಾರ್ಪಣೆ ಮಾಡಿದರು. ಇಡೀ ವಿಶ್ವವನ್ನೇ ಕಾಡುತ್ತಿರುವ ಕೋವಿಡ್-19 ರ ಉಪಟಳ ಅತೀ ಶೀಘ್ರದಲ್ಲೇ ಅಂತ್ಯಗೊಳ್ಳಲಿ. ಮುಂದೆಂದೂ ಮನುಕುಲಕ್ಕೆ ಇಂತಹ ಸಮಸ್ಯೆಗಳು ಕಾಡದಿರಲಿ ಎಂಬ […]