ಕೋವಿಡ್-19: ಸಗಟು ಮತ್ತು ಚಿಲ್ಲರೆ ವ್ಯಾಪಾರದ ಸರಬರಾಜು ಪ್ರಕ್ರಿಯೆಗೆ ನೋಡಲ್ ಅಧಿಕಾರಿ ನೇಮಕ: ಜಿಲ್ಲಾಧಿಕಾರಿ
ಉಡುಪಿ ಏಪ್ರಿಲ್ 3: ಕೋವಿಡ್-2019 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144(3) ರಂತೆ ನಿರ್ಬಂಧ ವಿಧಿಸಿ ಆದೇಶವನ್ನು ಹೊರಡಿಸಲಾಗಿದ್ದು, ಅದರಂತೆ ಜನರು ಹೊರಗಡೆ ಸಂಚಾರಿಸುವುದನ್ನು ನಿರ್ಬಂಧಿಸಲಾಗಿದೆ. ಮುಂದುವರಿದಂತೆ ನಿರ್ಬಂಧಗಳನ್ನು ಇನ್ನಷ್ಟು ಬಿಗಿಗೊಳಿಸುವ ಅವಶ್ಯಕತೆ ಕಂಡು ಬಂದ ಹಿನ್ನಲೆಯಲ್ಲಿ ಜನರಿಗೆ ಅಗತ್ಯವಿರುವ ದಿನಸಿ ಸಾಮಾಗ್ರಿಗಳು ಮತ್ತಿತರ ಅವಶ್ಯಕ ಸಾಮಾಗ್ರಿಗಳನ್ನು ನಿಗದಿತ ಸಮಯದಲ್ಲಿ ಮಾತ್ರ ಸಾಮಾಜಿಕ ಅಂತರವನ್ನು ಪಾಲಿಸಿ ಖರೀದಿಸಲು ಅವಕಾಶವನ್ನು ನೀಡಿ ಪ್ರತಿದಿನ ಬೆಳಿಗ್ಗೆ 7 ರಿಂದ 11 ರವರೆಗೆ ಸಮಯವಕಾಶವನ್ನು ನಿಗದಿಪಡಿಸಿ […]