ಬಂಟ್ವಾಳ: ಕೋವಿಡ್ 19 ಸೋಂಕಿತ 10 ತಿಂಗಳ ಮಗು ಸಂಪೂರ್ಣ ಗುಣಮುಖ; ಆಸ್ಪತ್ರೆಯಿಂದ ಡಿಸ್ಚಾರ್ಜ್
ಮಂಗಳೂರು: ಕೋವಿಡ್19 ಪಾಸಿಟಿವ್ ಆಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ 10 ತಿಂಗಳ ಮಗುವು ಸಂಪೂರ್ಣ ಗುಣಮುಖವಾಗಿ ಶನಿವಾರ ಆಸ್ಪತ್ರೆ ಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದೆ. ಮಗುವಿನ ತಾಯಿ ಹಾಗೂ ಅಜ್ಜಿಯ ಪರೀಕ್ಷಾ ವರದಿಗಳು ನೆಗೆಟಿವ್ ಆಗಿದೆ. ಇವರೂ ಕೂಡಾ ಇಂದು ಡಿಸ್ಚಾಜ್೯ ಆಗಿದ್ದಾರೆ. ಇದುವರೆಗೆ ದ.ಕ. ಜಿಲ್ಲೆಯ 12 ಕರೋನಾ ಪಾಸಿಟಿವ್ ಪ್ರಕರಣಗಳಲ್ಲಿ 6 ಮಂದಿ ಗುಣಮುಖರಾಗಿ, ಬಿಡುಗಡೆಗೊಂಡಿದ್ದಾರೆ. ಈ ವಾರ ಪೂರ್ತಿ ಅಂದರೆ ಏಪ್ರಿಲ್ 5 ರಿಂದ 11 […]