ಕೊರೊನಾ ಸುರಕ್ಷತಾ ಕ್ರಮಗಳನ್ನು ಉಲ್ಲಂಘಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನಯನಾ ಗಣೇಶ್ ಆಗ್ರಹ
ಉಡುಪಿ: ಕೊರೋನಾ ಸಂದರ್ಭದಲ್ಲಿ ಸರಕಾರದ ಸುರಕ್ಷತಾ ಕ್ರಮ ನಿಯಮಗಳನ್ನು ಉಲ್ಲಂಘಿಸಿ ಕೇವಲ ರಾಜಕೀಯ ದುರುದ್ದೇಶದಿಂದ ಮೇಕೆದಾಟು ಹೆಸರಿನಲ್ಲಿ ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ಜನ ವಿರೋಧಿ ಧೋರಣೆಯನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಖಂಡಿಸಿದ್ದಾರೆ. ರಾಜ್ಯದಲ್ಲಿ ಈಗಾಗಲೇಕೊರೊನಾ ಸೋಂಕು ವ್ಯಾಪಕವಾಗಿ ಸಮುದಾಯ ಮಟ್ಟಕ್ಕೆ ಹರಡುತ್ತಿರುವ ಬಗ್ಗೆ ರಾಜ್ಯ ಸರಕಾರ ಸೂಕ್ತ ಮುನ್ನೆಚ್ಚರಿಕೆಯನ್ನು ನೀಡಿದೆ. ಆದರೂ ಕಾಂಗ್ರೆಸ್ ನಾಯಕರು ಸಾವಿರಾರು ಜನರನ್ನು ಸೇರಿಸಿಕೊಂಡು ಸರ್ಕಾರದ ನಿಯಮವನ್ನು ಪಾಲಿಸದೇ ಮೇಕೆದಾಟು ಪಾದಯಾತ್ರೆ ಮಾಡುವುದರ ಮುಖಾಂತರ ಹಠಮಾರಿ ಧೋರಣೆ ಪ್ರದರ್ಶಿಸಿ […]