ಮಾ.16 ರಂದು 12ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕಾ ಚಾಲನೆ
ಉಡುಪಿ, ಮಾ.15: ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ 12 ರಿಂದ 14 ವರ್ಷದವರೆಗಿನ ಮಕ್ಕಳಿಗೆ (2008, 2009 ಮತ್ತು 2010 ರಲ್ಲಿ ಮಾರ್ಚ್ 15 ರ ಒಳಗೆ ಜನಿಸಿದ ಮಕ್ಕಳು) ಕೋವಿಡ್-19 ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆಯು ಮಾರ್ಚ್ 16 ರಂದು ಬೆಳಗ್ಗೆ 11 ಗಂಟೆಗೆ ನಗರದ ಅಜ್ಜರಕಾಡು ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.