ಗೋಹತ್ಯೆ ನಿಷೇಧ ಕಾನೂನನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವನೆ ಇಲ್ಲ: ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್

ಬೆಂಗಳೂರು: ಗೋಹತ್ಯೆ ನಿಷೇಧಿಸುವ ಕಾನೂನನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಕರ್ನಾಟಕ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಬುಧವಾರ ವಿಧಾನ ಪರಿಷತ್ತಿಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಕರ್ನಾಟಕ ಜಾನುವಾರು ವಧೆ ತಡೆ ಮತ್ತು ಸಂರಕ್ಷಣೆ ಕಾಯಿದೆ, 2020 ಅನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ವೆಂಕಟೇಶ್, ಇನ್ನೂ ಕಾಯ್ದೆಯ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದಿದ್ದಾರೆ. ವೆಂಕಟೇಶ್ ಅವರ ಹೇಳಿಕೆಯ ಹೊರತಾಗಿಯೂ, ಬಿಜೆಪಿ […]

ಮತಾಂತರ ಮತ್ತು ಗೋಹತ್ಯಾ ನಿಷೇಧ ಕಾಯ್ದೆ ವಾಪಸ್ ಪಡೆಯುವುದು ಅತ್ಯಂತ ಕಳವಳಕಾರಿ: ಪೇಜಾವರ ಶ್ರೀ

ಉಡುಪಿ: ಹಿಂದಿನ ಸರ್ಕಾರವು ಸಮಾಜದಲ್ಲಿ ಏರ್ಪಟ್ಟಿದ್ದ ಗೊಂದಲ ಪರಿಹಾರಕ್ಕಾಗಿ ಮತಾಂತರ ನಿಷೇಧ ಕಾಯ್ದೆ ಮತ್ತು ಗೋ ಹತ್ಯಾ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ಪ್ರಸ್ತುತ ಸರ್ಕಾರವು ಈ ಎರಡೂ ಕಾಯ್ದೆಯನ್ನು ಹಿಂಪಡೆಯುವ ನಿರ್ಧಾರ ಮಾಡಿದ್ದು ಇದು ಅತ್ಯಂತ ಕಳವಳಕಾರಿ ವಿಚಾರ. ರಾಜ್ಯ ಸರ್ಕಾರವು ಮತಾಂತರ ನಿಷೇಧ ಕಾಯ್ದೆ ಮತ್ತು ಗೋಹತ್ಯಾ ನಿಷೇಧ ಕಾಯ್ದೆ ಹಿಂಪಡೆಯುವ ದುಸ್ಸಾಹಸ ಮಾಡಬಾರದು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ. ಸರ್ಕಾರವು ಕಾನೂನು ಹಿಂಪಡೆಯುವ ದುಸ್ಸಾಹಸ ಮಾಡಬಾರದು. […]