ಪ್ರಾಣಿಗಳ ಅನಧಿಕೃತ ವಧೆ ಮೇಲೆ ಕಣ್ಗಾವಲಿಡಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ: ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಲೋಪ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಶನಿವಾರ ವರ್ಚುವಲ್ ಮೂಲಕ ಬಕ್ರೀದ್ ಆಚರಣೆ ಸಂದರ್ಭ ಅನಧಿಕೃತವಾಗಿ ಜಾನುವಾರಗಳ ವಧೆ ಹಾಗೂ ಸಾಗಾಣಿಕೆ ತಡೆಗಟ್ಟಲು ರಚಿಸಿರುವ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾಣಿಗಳ ಅನಧಿಕೃತ ವಧೆ ತಡೆಯಲು ಗೋಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು ಇಡುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಿದ […]

ಗೋಹತ್ಯೆ ವಿರೋಧಿ ಕಾನೂನಿನ ಬಗ್ಗೆ ಸಚಿವ ವೆಂಕಟೇಶ್ ವಿವಾದಿತ ಹೇಳಿಕೆ: ಮಿತಿಯಲ್ಲಿರಲು ಸೂಚಿಸಿದ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ರಾಜ್ಯದಲ್ಲಿನ ಗೋಹತ್ಯೆ ವಿರೋಧಿ ಕಾನೂನಿನ ಬಗ್ಗೆ ಕರ್ನಾಟಕ ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ಅವರ ಅಭಿಪ್ರಾಯಗಳಿಗಾಗಿ ಕಾಂಗ್ರೆಸ್ ಹೈಕಮಾಂಡ್ ಗುರುವಾರ ಅವರಿಗೆ ಛೀಮಾರಿ ಹಾಕಿದೆ ಮತ್ತು “ತಮ್ಮ ಮಿತಿಯೊಳಗೆ” ಇರುವಂತೆ ಹೇಳಿದೆ ಎಂದು ವರದಿಯಾಗಿದೆ. ಕರ್ನಾಟಕ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕದ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸಚಿವ ಕೆ ವೆಂಕಟೇಶ್ ಅವರಿಗೆ ತಮ್ಮ ಮಿತಿಯಲ್ಲಿರಲು ಸೂಚಿಸಿದ್ದಾರೆ. ಕೆಲ ದಿನಗಳ ಹಿಂದೆ ಕೆ.ವೆಂಕಟೇಶ್ ಅವರು ಎಮ್ಮೆ, ಹೋರಿಗಳನ್ನು ಕಡಿಯುವುದಾದರೆ ಗೋಹತ್ಯೆ ಮಾಡುವುದರಲ್ಲಿ ತಪ್ಪೇನು? […]

ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ ತಿರುಚಿದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ: ಬಿಜೆಪಿ

ಬೆಂಗಳೂರು: ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಯ (ಕೆಪಿಎಸ್‌ಪಿಸಿಎ) ಅಸ್ತಿತ್ವದಲ್ಲಿರುವ ನಿಬಂಧನೆಗಳನ್ನು ತಿರುಚಲು ಆಡಳಿತಾರೂಢ ಕಾಂಗ್ರೆಸ್ ಪ್ರಯತ್ನಿಸಿದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಬಿಜೆಪಿ ಭಾನುವಾರ ಎಚ್ಚರಿಕೆ ನೀಡಿದೆ. ಗೋಹತ್ಯೆ ನಿಷೇಧವನ್ನು ಎಮ್ಮೆಗಳಿಗೂ ವಿಸ್ತರಿಸದಿರುವುದನ್ನು ಪ್ರಶ್ನಿಸಿ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಗದ್ದಲ ಎಬ್ಬಿಸಿದ ಒಂದು ದಿನದ ಬಳಿಕ ಈ ಎಚ್ಚರಿಕೆ ಬಂದಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್, 2021 ರಲ್ಲಿ ಕೆಪಿಎಸ್‌ಪಿಸಿಎ ಜಾರಿಗೆ ಬಂದಿತು ಮತ್ತು ಅದರ ನಿಬಂಧನೆಗಳನ್ನು ಚೆನ್ನಾಗಿ […]

ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ ನಿಷೇಧ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸಲಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಸಂವಾದ ನಡೆಸಿದ ಖರ್ಗೆ, ‘ಬಿಜೆಪಿಗೆ ಕಷ್ಟವಾದರೆ ಪಾಕಿಸ್ತಾನಕ್ಕೆ ಹೋಗಲಿ’ ಎಂದು ಹೇಳಿದರು. ಕರ್ನಾಟಕವನ್ನು ಸ್ವರ್ಗವನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ, ಶಾಂತಿ ಕದಡಿದರೆ ಅದು ಭಜರಂಗದಳ ಅಥವಾ ಆರ್‌ಎಸ್‌ಎಸ್ ಎಂದು ಪರಿಗಣಿಸುವುದಿಲ್ಲ, ಕಾನೂನು ಕೈಗೆತ್ತಿಕೊಂಡಾಗ ಬಜರಂಗದಳ, ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಗೆ ನಿಷೇಧ ಹೇರಲಾಗುವುದು ಎಂದು […]

ಬಕ್ರೀದ್ ಹಿನ್ನೆಲೆ ಜಾನುವಾರುಗಳ ಅನಧಿಕೃತ ವಧೆ, ಸಾಗಾಣಿಕೆ ಮೇಲೆ ನಿರ್ಬಂಧ: ಕಣ್ಗಾವಲು ಪಡೆ ರಚನೆ

ಉಡುಪಿ: ಜುಲೈ 10 ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ನಿಷೇಧಿಸಲಾಗಿದ್ದು, ಗೋಹತ್ಯೆ ನಿಷೇಧ ಕಾಯ್ದೆಯಡಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು ಇರಿಸುವಂತೆ ಸಂಬಂಧಪಟ್ಟ ಇಲಾಖೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು. ಅವರು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ, ಬಕ್ರೀದ್ ಹಬ್ಬ ಆಚರಣೆ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ರಚಿಸಿರುವ ಜಿಲ್ಲಾ ಸಮಿತಿಯೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಾದ್ಯಂತ ಇರುವ ಚೆಕ್ […]