ಗೋ ಹತ್ಯೆ ನಡೆಸುವವರ ವಿರುದ್ದ ಆಸ್ತಿ ಮುಟ್ಟುಗೋಲು ಅಸ್ತ್ರ: ಮಂಗಳೂರಿನಲ್ಲಿ ಪ್ರಥಮ ಪ್ರಯೋಗ
ಮಂಗಳೂರು: ಗೋ ಹತ್ಯೆ ನಡೆಸುವವರ ವಿರುದ್ದ ಆಸ್ತಿ ಮುಟ್ಟುಗೋಲು ಅಸ್ತ್ರ ಪ್ರಯೋಗಕ್ಕೆ ಸಿದ್ದತೆ ನಡೆದಿದ್ದು, ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಪ್ರಥಮವಾಗಿ ಜಾರಿಗೆ ಬರಲಿದೆ. ಮಂಗಳೂರು ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಈಗಾಗಲೇ ಪ್ರಕ್ರಿಯೆ ಶುರು ಮಾಡಿದ್ದಾರೆ. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಗೋ ಹತ್ಯೆ ಮತ್ತು ಗೋಮಾಂಸ ಮಾರಾಟ ಪ್ರಕರಣದಲ್ಲಿ ಈ ಪ್ರಕ್ರಿಯೆ ಶುರುವಾಗಿದೆ. ಕಳೆದ ಭಾನುವಾರ ಅರ್ಕುಳದಲ್ಲಿ ಕಸಾಯಿಖಾನೆಗೆ ದಾಳಿ ನಡೆಸಿ 95 ಕೆ.ಜಿ ಗೋ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಖಾಲಿದ್ […]