ದುರ್ಗಾ ದೌಡ್-ಪ್ರಚೋದನಕಾರಿ ಭಾಷಣದ ವಿರುದ್ದ ಕ್ರಮ ಕೈಗೊಳ್ಳಿ: ಸಿಪಿಐ(ಎಂ) ಆಗ್ರಹ
ಉಡುಪಿ: ಅಕ್ಟೋಬರ್ 2ರಂದು ಉಡುಪಿಯಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಂದರ್ಭದಲ್ಲಿ ಖಡ್ಗವನ್ನು ಝಳಪಿಸುತ್ತಾ ಮೆರವಣಿಗೆ ಮಾಡಿದ್ದು ಮಾತ್ರವಲ್ಲದೆ, ಸಭೆಯಲ್ಲಿ ಉದ್ರೇಕಕಾರಿ ಭಾಷಣ ಮಾಡಿದ್ದು ಪತ್ರಿಕೆಗಳಲ್ಲಿ ವರದಿಯಾಗಿದೆ. ಇದರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಆಗ್ರಹಿಸುತ್ತದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ಸಚಿವರಾದ ಸುನೀಲ್ ಕುಮಾರ್ ಮತ್ತು ಕೆಲವು ಶಾಸಕರೂ ಭಾಗವಹಿಸಿದ್ದು ಅವರ ಎದುರಿನಲ್ಲೇ ಇಂತಹ ಕಾರ್ಯಕ್ರಮಗಳು ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಜನರು ಇಂತಹ ಪ್ರಜಾಪ್ರಭುತ್ವ ವಿರೋಧಿ ನಡವಳಿಕೆಗಳನ್ನು ತಿರಸ್ಕರಿಸಬೇಕೆಂದು ಸಿಪಿಐ(ಎಂ) ಮನವಿ […]