ಪಿರಾನಾ ಹಂಟರ್ಸ್ ತೆಕ್ಕೆಗೆ ಸಿಪಿಎಲ್ 2023 ಕ್ರಿಕೆಟ್ ಟ್ರೋಫಿ
ಮಂಗಳೂರು: ಮಂಗಳೂರಿನ ಉರ್ವಾ ಮುನ್ಸಿಪಲ್ ಕ್ರೀಡಾಂಗಣದಲ್ಲಿ ನವಂಬರ್ 11 ಮತ್ತು 12 ರಂದು ಮಂಗಳೂರು ಪ್ರಾಂತ್ಯದ ಕಥೊಲಿಕ್ ಕ್ರಿಶ್ಚಿಯನ್ನರ ಕ್ರಿಕೆಟ್ ಕ್ರೀಡಾಕೂಟವು ನಡೆಯಿತು. ಮೊದಲನೆ ದಿನ ವಂದನೀಯ ಬೆಂಜಮಿನ್ ಪಿಂಟೋ ಆಶೀರ್ವಚಿಸಿ ಎಲ್ಲಾ ಆಟಗಾರರಿಗೆ ಶುಭ ಹಾರೈಸಿದರು. ಮುಖ್ಯ ಅಥಿತಿಗಳಾದ ಶಾಸಕ ಉಮಾನಾಥ ಕೋಟ್ಯಾನ್ ಮಾತಾನಾಡಿ, ಇಂತಹ ಪಂದ್ಯಾಟದಿಂದ ಆಟಗಾರರ ದೈಹಿಕ, ಮಾನಸಿಕ ಸಾಮರ್ಥ್ಯವು ವೃದ್ಧಿಯಾಗಿ ಸಮಾಜದಲ್ಲಿ ಅನ್ಯೋನ್ಯತೆಯಿಂದ ಬಾಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಸಂಪತ್ ಶೆಟ್ಟಿ, ಸಿಎ ಕೊಲಿನ್ ರೊಡ್ರಿಗಸ್, ಫ್ರಾನ್ಸಿಸ್ ಡಿಸೋಜ ಅಥಿತಿಗಳಾಗಿ ಆಗಮಿಸಿದ್ದರು. […]