ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಸಿಪಿಐಎಂ ಪ್ರತಿಭಟನೆ

ಉಡುಪಿ: ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ಕಲ್ಪಿಸಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಸಿಪಿಐಎಂ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಅಜ್ಜರಕಾಡು ಹುತಾತ್ಮ ಸೈನಿಕರ ಸ್ಮಾರಕ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಉಡುಪಿ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ವಿಭಜಿಸಿ ಕೇಂದ್ರದ ಆಡಳಿತಕ್ಕೆ ಒಳಪಡಿಸಿದ ಕೇಂದ್ರ ಸರ್ಕಾರದ ನೀತಿಯು ಸಂವಿಧಾನ ಮತ್ತು ಪ್ರಜಾಪ್ರಭುತ್ವ ತತ್ವಗಳಿಗೆ ಮಾರಕವಾಗಿದೆ. ರಾಜ್ಯಪಾಲರ ಆಡಳಿತ […]